ನ್ಯೂಸ್ ನಾಟೌಟ್: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ(ಮೇ.19) ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರೈಸಿ ಅವರಿದ್ದ ಹೆಲಿಕಾಪ್ಟರ್ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್ಗಳು ಸುರಕ್ಷಿತವಾಗಿ ಹಿಂದಿರುಗಿವೆ. ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು ಇರಾನಿನ ಮಾಧ್ಯಮ ಚಾನೆಲ್ಗಳು, ರಕ್ಷಣಾ ತಂಡಗಳು ರೈಸಿಯ ಹೆಲಿಕಾಪ್ಟರ್ನ ಅವಶೇಷಗಳನ್ನು ಪತ್ತೆಮಾಡಿದ್ದವು.