ನ್ಯೂಸ್ ನಾಟೌಟ್: ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಖಂಡಿಸಿ ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು.
ಮೇ.20 ರಂದು ಮತ್ತೆ ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆ ಮೇ.22 ರಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ಕಾದು ನಿಂತಿದ್ದಾರೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಇದೆ ಎನ್ನಲಾಗಿದೆ. ಮನೆಗೆ ಹೋಗುವ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಸೇರಿದ್ದಾರೆ ಎನ್ನಲಾಗಿದೆ.
Click 👇