ನ್ಯೂಸ್ ನಾಟೌಟ್: ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಸ್ಪೋಟಕ ಮತ್ತು ಅಚ್ಚರಿಯ ಮಾಹಿತಿಗಳನ್ನು ಹಂಚಿಕೊಂಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಟ್ಟು 8,337 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅದರಲ್ಲಿ1,644 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಮತ್ತು ಅವರು ಹಲವು ಬಗೆಯ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಈ ಅಭ್ಯರ್ಥಿಗಳ ಪೈಕಿ 1,188 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಕೊಲೆ, ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷದ ಭಾಷಣಕ್ಕೆ ಸಂಬಂಧಿಸಿದ ಆರೋಪಗಳಿವೆ ಎಮದು ವರದಿ ತಿಳಿಸಿದೆ. ಒಟ್ಟಾರೆ ಎಡಿಆರ್ ಒಟ್ಟು 8,360 ಅಭ್ಯರ್ಥಿಗಳ ಪೈಕಿ 8,337 ಅಭ್ಯರ್ಥಿಗಳ ಅಫಿಡವಿಟ್ಗಳನ್ನು ವಿಶ್ಲೇಷಿಸಿದೆ. ಚುನಾವಣಾ ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗುತ್ತದೆ ಎಂದು ಚುನಾವಣಾ ಆಯೋಗ ಈಗಾಗಲೇ ತಿಳಿಸಿದೆ ಇದರಲ್ಲಿ ಈ ಆರೋಪಿಗಳ ಭವಿಷ್ಯವೂ ಅಡಗಿರುವುದು ಆಘಾತಕಾರಿ ವಿಷಯ.
Click 👇