ಗೋಳಿತೊಟ್ಟು: ಇಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ದಿಢೀರ್ ಅಸ್ವಸ್ಥಗೊಂಡು ಸಾವಿಗೀಡಾದ ಘಟನೆ ನಡೆದಿದೆ.
ಹಸರು ರಾಜೇಂದ್ರ ಯಾದವ್ (44). ಆತ ಜಾರ್ಖಂಡ್ ಮೂಲದವನು ಎಂದು ತಿಳಿದು ಬಂದಿದೆ. ಗೋಳಿತೊಟ್ಟು ಕಾಂಚನದಲ್ಲಿ ಕೆಎನ್ ಆರ್ ಕನ್ಸ್ಟ್ರಕ್ಷನ್ ನಲ್ಲಿ ಟಿಪ್ಪರ್ ಚಾಲಕ ವಿಕಾಸ್ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾ.21ರಂದು ಬೆಳಿಗ್ಗೆ ರಾಜೇಂದ ಯಾದವ್ ಗೆ ಎದೆ ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ಆತನನ್ನು ಪ್ರತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿ ಆತ ಮೃತಪಟ್ಟಿರುವ ಬಗ್ಗೆ ತಿಳಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.