ನ್ಯೂಸ್ ನಾಟೌಟ್: ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಶನಿವಾರ ತಡರಾತ್ರಿ ದೆಹಲಿಯ ಆಸ್ಪತ್ರೆಯೊಂದರಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್ನಲ್ಲಿ ರಾತ್ರಿ 11:32ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7 ಶಿಶು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.
ಆಸ್ಪತ್ರೆಯೊಳಗೆ ಇಡಲಾಗಿದ್ದ ಹಲವಾರು ಆಮ್ಲಜನಕ ಸಿಲಿಂಡರ್ಗಳೂ ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆ ಕಟ್ಟಡ ಮತ್ತು ಎರಡು ಮಹಡಿಗಳು ವಸತಿ ಕಟ್ಟಡಗಳು ಬೆಂಕಿಯಿಂದ ಹಾನಿಗೊಳಗಾಗಿವೆ. 16 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಬಂದು ಭಾನುವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.