ನ್ಯೂಸ್ ನಾಟೌಟ್: ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಟ್ರಸ್ಟ್ ಆದೇಶ ಹೊರಡಿಸಿದೆ. ಶನಿವಾರ(ಮೇ.25) ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ದೇವಸ್ಥಾನದಲ್ಲಿ ಸಾರ್ವಜನಿಕರು ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೊಯ್ಯುವುದನ್ನೂ ನಿಷೇಧಿಸಲಾಗಿದೆ. ರಾಮಮಂದಿರ ಟ್ರಸ್ಟ್ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆಯಲ್ಲಿ ಮೊಬೈಲ್ ಫೋನ್ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್ ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇದೆ ಎಂದು ಟ್ರಸ್ಟಿ ಹೇಳಿದ್ದಾರೆ. ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್ಗೆ ಸಹಕರಿಸಬೇಕು ಎಂದಿದ್ದಾರೆ.
Click 👇