ನ್ಯೂಸ್ ನಾಟೌಟ್: ಜೂನ್ 1ರಿಂದ 5 ದಿನಗಳ ಕಾಲ ಮದ್ಯದಂಗಡಿಗಳು ಬಂದ್ ಮಾಡಲಾಗುವುದು ಎಂದು ಬೆಂಗಳೂರು ಜಿಲ್ಲಾಡಳಿತ ಸೂಚನೆ ನೀಡಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು ಘೋಷಣೆ ಮಾಡದೆ ಎನ್ನಲಾಗಿದೆ. ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ ಎನ್ನಲಾಗಿದೆ.
ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
Click 👇