ನ್ಯೂಸ್ ನಾಟೌಟ್: ವಿಶ್ವ ವಿಶ್ವ ಸ್ಕಿಜೋಫ್ರೇನಿಯಾ ದಿನದ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೇ 28 ರಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು AOLE (R) ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕ ಡಾ| ಕೆ ವಿ ಚಿದಾನಂದ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಜರಿ ವಿಭಾಗದ ಮುಖ್ಯಸ್ಥ ಡಾ ಗೋಪಿನಾಥ್ ಪೈ ಬಿತ್ತಿಪತ್ರ ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿದರು. ಮನೋವೈದ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕ ಡಾ| ಪೂನಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ ನೀಲಾಂಬಿಕೈ ನಟರಾಜನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. KVG Institute of Nursing ಜಿಎನ್ಎಮ್ ವಿಭಾಗದ ಪ್ರಾಂಶುಪಾಲೆ ಚಂದ್ರಾವತಿ ಹಾಗೂ ಬಿಎಸ್ಸಿ ನರ್ಸಿಂಗ್ ವಿಭಾಗದ ಪ್ರಾಂಶುಪಾಲೆ ಪ್ರೇಮ ಪಾಲ್ಗೊಂಡಿದ್ದರು. ಡಾ ಯಶ್ವಂತ್ ಕಾರ್ಯಕ್ರಮ ನಿರೂಪಿಸಿದರು. ಡಾ ರಾಘವ್ ಧನ್ಯವಾದ ಸಮರ್ಪಿಸಿದರು.