ನ್ಯೂಸ್ ನಾಟೌಟ್: ದೇಗುಲ ಧ್ವಂಸಗೊಳಿಸಿ ಟಿಪ್ಪು ಸುಲ್ತಾನ್ ವಿವಾದಿತ ಜಾಮೀಯಾ ಮಸೀದಿ ನಿರ್ಮಾಣ ಮಾಡಿದ್ದಾರೆ ಎಂದು ಈ ಕುರಿತು ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಹಾಗೂ ಎಎಸ್ಐಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯದ ಬಗ್ಗೆ ಈ ಅರ್ಜಿ ಸಲ್ಲಿಸಲಾಗಿದೆ. ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿಯ ಭಜರಂಗ ಸೇನೆ ರಾಜ್ಯಾಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ಎನ್.ವಿ. ಅಂಜಾರಿಯಾ ಹಾಗೂ ನ್ಯಾ.ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು ಎನ್ನಲಾಗಿದೆ. ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಲಯ, ಇಲ್ಲಿ ಸಂರಕ್ಷಿತ ಸ್ಮಾರಕದ ಕುರಿತು ಪ್ರಶ್ನಿಸಲಾಗಿದ್ದು, ಅರ್ಜಿ ಮೂಲಕ ನ್ಯಾಯ ವ್ಯಾಪ್ತಿ ಬದಲಾಯಿಸಲು ಕಷ್ಟ ಸಾಧ್ಯ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ಪ್ರಕರಣ ಸಂಬಂಧ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜು. 11ಕ್ಕೆ ಮುಂದೂಡಿದೆ ಎಂದು ವರದಿ ತಿಳಿಸಿದೆ.
Click 👇