ನ್ಯೂಸ್ ನಾಟೌಟ್: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು(ಜೂನ್ 2) ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ವರದಿ ತಿಳಿಸಿದೆ. ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್ ಜೈಲು ಪಾಲಾಗಿದ್ದರು, ಚುನಾವಣೆ ಪ್ರಚಾರ ಕಾರಣಕ್ಕೆ ಮಧ್ಯಂತರ ಜಾಮೀನು ಮೇರೆಗೆ ಹೊರ ಬಂದಿದ್ದರು.
ನಿನ್ನೆಗೆ(ಜೂನ್ 1) ಜಾಮೀನು ಅವಧಿ ಅಂತ್ಯಗೊಂಡಿದೆ. ಈ ಹಿನ್ನೆಲೆ ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಮರಳಲಿದ್ದಾರೆ ಎನ್ನಲಾಗಿದೆ. ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್ಗೆ ಕೇಜ್ರಿವಾಲ್ ಈಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು, ಮತ್ತೆ ಅರ್ಜಿಯ ವಿಚಾರಣೆ ಜೂನ್ 5 ರಂದು ನಡೆಯಲಿದೆ. ಎಎಪಿ ನಾಯಕ ಶರಣಾಗಲು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುವುದಾಗಿ ತಿಳಿಸಿದ್ದಾರೆ.