ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಯ ಜೊತೆಗೆ ನಡೆದ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಅರುಣಾಚಲಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಮೂರನೇ ಬಾರಿ ಗೆದ್ದಿದೆ. ಮತ್ತೊಂದೆಡೆ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದು ವರದಿ ತಿಳಿಸಿದೆ.
ಇನ್ನು ದೇಶ ಅತಿ ಹೆಚ್ಚು ಅವಧಿ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಪವನ್ ಕುಮಾರ್ ಚಾರ್ಮ್ಲಿಂಗ್ ಪೋಕ್ಲೋಕ್-ಕಮ್ರಾಂಗ್ ಕ್ಷೇತ್ರದಲ್ಲಿ ಸೋಲಾಗಿದೆ ಎಂದು ವರದಿ ತಿಳಿಸಿದೆ. ಚುನಾವಣಾ ಆಯೋಗದ ಪ್ರಕಾರ ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರಗಳ ಪೈಕಿ 42ಸ್ಥಾನಗಳನ್ನು ಬಿಜೆಪಿ ಪಡೆದಿದೆ. 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ.