ನ್ಯೂಸ್ ನಾಟೌಟ್: ವಿಧಾನ ಪರಿಷತ್ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ವಿಧಾನಸೌಧ ಕಾರಿಡಾರ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖಾಮುಖಿಯಾದ ಘಟನೆ ನಡೆದಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಕೇಸ್ ಬಳಿಕ ಇದು ಮೊದಲ ಮುಖಾಮುಖಿಯಾಗಿದೆ.
ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪರಸ್ಪರ ಮುಖಾಮುಖಿಯಾದರು. ಆದರೆ ಉಭಯ ನಾಯಕರು ಮುಖವನ್ನೂ ನೋಡದೇ ತೆರಳಿದ್ದು ಚರ್ಚೆಗೆ ಕಾರಣವಾಗಿದೆ. ತಮ್ಮ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ವಿಧಾನಸಭೆ ಕಾರ್ಯದರ್ಶಿ ಚೇಂಬರ್ ಹೊರಗಡೆ ಸಿಎಂ ಸಿದ್ದರಾಮಯ್ಯ ನಿಂತಿದ್ದರು. ಈ ವೇಳೆ, ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿ ಕುಮಾರಸ್ವಾಮಿ ಹೊರಗೆ ಬರುತ್ತಿರುವಾಗ ಇಬ್ಬರೂ ಮುಖಾಮುಖಿಯಾದರು.
ಪರಸ್ಪರ ಎದುರಾದಾಗ ಉಭಯ ನಾಯಕರು ನಮಸ್ಕರಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಜಿ.ಟಿ. ದೇವೇಗೌಡರ ಬಳಿ ಕುಶಲೋಪರಿ ವಿಚಾರಿಸಿದರು. ಜಿ.ಟಿ. ದೇವೆಗೌಡರಿಗೆ ಶೇಕ್ ಹ್ಯಾಂಡ್ ಮಾಡಿ ಆತ್ಮೀಯವಾಗಿ ಮಾತನಾಡಿಸಿದರು. ಕೆಲ ಜೆಡಿಎಸ್ ಶಾಸಕರು ಸಹ ಸಿಎಂ ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.
Click 👇