ನ್ಯೂಸ್ ನಾಟೌಟ್: ಅಮುಲ್ ಇಂದಿನಿಂದಲೇ(june 3) ಜಾರಿಗೆ ಬರುವಂತೆ ಹಾಲಿನ ದರ ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ದೆಹಲಿಯಲ್ಲಿ ಮದರ್ ಡೈರಿ ಕೂಡ ಹಾಲಿನ ಬೆಲೆ ಏರಿಕೆ ಮಾಡಿದೆ. ಇದೀಗ ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆ ಕೂಡ ಏರಿಕೆಯಾಗಬಹುದು ಎಂಬ ಮಾಹಿತಿ ಹರಿದಾಡುತ್ತಿದೆ. ದೇಶದಾದ್ಯಂತ ಸಹಕಾರಿ ಹಾಲು ಒಕ್ಕೂಟಗಳು ಬೆಲೆ ಏರಿಕೆಗೆ ಮುಂದಾಗಿರುವುದೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.
ಮದರ್ ಡೈರಿಯು ದೆಹಲಿ-ಎನ್ಸಿಆರ್ನಲ್ಲಿ ಹಾಲಿನ ದರದಲ್ಲಿ ಲೀಟರ್ಗೆ 2 ರೂಪಾಯಿ ಹೆಚ್ಚಳ ಮಾಡಿದೆ. ದೆಹಲಿ-ಎನ್ಸಿಆರ್ ಮತ್ತು ಇತರ ಮಾರುಕಟ್ಟೆಗಳಲ್ಲಿ ಸೋಮವಾರದಿಂದಿಂದಲೇ (ಜೂನ್ 3) ಹಾಲಿನ ಎಲ್ಲಾ ವಿಧಗಳ ಮೇಲೆ ಬೆಲೆ ಏರಿಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ. ಅಮುಲ್ ಕಂಪನಿಯು ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿ ಸೋಮವಾರ ಬೆಳಗ್ಗೆ ಪ್ರಕಟಣೆ ಹೊರಡಿಸಿತ್ತು. ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಕೆಎಂಎಫ್ ಕಳೆದ ವರ್ಷ ಆಗಸ್ಟ್ನಲ್ಲಿ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿತ್ತು.
Click 👇