ನ್ಯೂಸ್ ನಾಟೌಟ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರ ಬೇಹುಗಾರಿಕೆ ನಡೆಸಿದ್ದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್ಗೆ ನಾಗ್ಪುರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ ಎಂದು ವರದಿ ತಿಳಿಸಿದೆ.
ನಿಶಾಂತ್ ಅಗರ್ವಾಲ್, ನಾಗ್ಪುರದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ನ ತಾಂತ್ರಿಕ ಸಂಶೋಧನಾ ವಿಭಾಗದಲ್ಲಿ ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದ ಎನ್ನಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ವಿ.ದೇಶಪಾಂಡೆ ಇದ್ದ ಪೀಠ ನಿಶಾಂತ್ ಅಗರ್ವಾಲ್ನನ್ನು ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ನಿಶಾಂತ್ ಅಗರ್ವಾಲ್ ಅಪರಾದ ಕೃತ್ಯದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ ಎಂದು ವರದಿ ತಿಳಿಸಿದೆ.
ಈ ಕಾರಣದಿಂದ ಅಗರ್ವಾಲ್ನನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎನ್ನಲಾಗಿದೆ. ಆತನ ವಿರುದ್ಧ ಪಾಕಿಸ್ತಾನಕ್ಕೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ನ (ಐಎಸ್ಐ) ತಾಂತ್ರಿಕ ಮಾಹಿತಿಯನ್ನು ಸೋರಿಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಬಳಿಕ ಆತನನ್ನು 2018 ರಲ್ಲಿ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಮಿಲಿಟರಿ ಗುಪ್ತಚರ ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿತ್ತು ಎನ್ನಲಾಗಿದೆ.
Click 👇