ನ್ಯೂಸ್ ನಾಟೌಟ್: ಕಾಂಗ್ರೆಸ್ನ ಪ್ರಿಯಾಂಕ ಜಾರಕಿಹೊಳಿ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನ ಪರ ಜೈಕಾರ ಕೂಗಿದ ಘಟನೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಜಮೀರ್ ನಾಯಕವಾಡಿ ಎಂದು ಗುರುತಿಸಲಾಗಿದೆ.
25 ವರ್ಷದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪಾಕಿಸ್ತಾನಕ್ಕೆ ಜೈಕಾರ ಕೂಗಿದ್ದ. ಆ ತಕ್ಷಣವೇ ವಿಷಯ ಬಹಿರಂಗಗೊಂಡು ಆಕ್ರೋಶ ವ್ಯಕ್ತವಾಗಿತ್ತು ಎನ್ನಲಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
Click 👇