ನ್ಯೂಸ್ ನಾಟೌಟ್: ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸುವ ಬಗ್ಗೆ ಸಕಲ ತಯಾರಿಗಳು ನಡೆಯುತ್ತಿವೆ, ಹಳೆ ಸರ್ಕಾರ ವಿಸರ್ಜಿಸಿ ಮಿತ್ರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆ ಪ್ರಧಾನಿ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ನರೇಂದ್ರ ಮೋದಿ ಮತ್ತೆ ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ(Muslim) ಮತದಾರರೇ ಹೆಚ್ಚಿನ ಪ್ರಾಬಲ್ಯ ಗಳಿಸಿದ್ದಾರೆ ಎನ್ನಲಾಗಿದೆ. ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರುವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದು, ಇವರು ಲೋಕಸಭೆಗೆ ಪ್ರವೇಶಿಸಲಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿಯನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ. 2019ರ ಚುನಾವಣೆಯಲ್ಲಿ 115 ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು 3,38,087 ಮತಗಳ ಅಂತರದಿಂದ ಸೋಲಿಸಿದ್ದಾರೆ. ಲಡಾಖ್ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಅಬ್ದುಲ್ ರಶೀದ್ ಶೇಖ್, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮೊಹಿಬುಲ್ಲಾ, ಸಂಭಾಲ್ನಲ್ಲಿ ಜಿಯಾ ಉರ್ ರೆಹಮಾನ್ ಗೆದ್ದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಕ್ಷೇತ್ರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ಮಿಯಾನ್ ಅಲ್ತಾಫ್ ಅಹ್ಮದ್, ಶ್ರೀನಗರದಲ್ಲಿ ಎನ್ಸಿ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹ್ದಿ ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ
Click 👇
.