ನ್ಯೂಸ್ ನಾಟೌಟ್: ಕ್ರಿಕೆಟ್ ವೇಳೆ ನಡೆಯುತ್ತಿದ್ದ ಸ್ವಾರಸ್ಯಕರ ಘಟನೆಗಳು ಈಗ ಲೋಕಸಭಾ ಚುನಾವಣಾ ಫಲಿತಾಂಶದ ದಿನ ನಡೆದಿವೆ. ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಎನ್ ಡಿಎ ಮೈತ್ರಿಕೂಟ 400 ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದ್ದರಿಂದ ಆಕ್ರೋಶಗೊಂಡ ರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಗೋವಿಂದ್ ಪರಾಶರ್ ಎಂಬಾತ ಟಿವಿಯನ್ನೇ ಒಡೆದು ಹಾಕಿದ ಘಟನೆ ನಡೆದಿದೆ.
ಈ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಮಂಗಳವಾರ(ಜೂ.4) ನಡೆದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ 400ಕ್ಕೂ ಅಧಿಕ ಸ್ಥಾನಗಳು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರು ಹೇಳಿಕೊಂಡಿದ್ದರು. ಆದರೆ’ಅಬ್ ಕಿ ಬಾರ್ 400 ಪಾರ್’ ನಿಜವಾಗಲಿಲ್ಲ ಬದಲಿಗೆ ಯಾವ ಪಕ್ಷಕ್ಕೂ ಸರಿಯಾದ ಸಹಮತ ಸಿಗದೆ ಹೊಂದಾಣಿಕೆಯ ರಾಜಕಾರಣ ಮಾಡುವಂತಾಗಿದೆ. ಹಲವು ಚುನಾವಣೋತ್ತರ ಸಮೀಕ್ಷೆಗಳು ಕೂಡಾ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 380ರಿಂದ 400ಕ್ಕೂ ಅಧಿಕ ಸ್ಥಾನಗಳನ್ನು ಪಡೆಯಲಿದೆ ಎಂದಿದ್ದವು ಅವುಗಳೂ ಈ ಸುಳ್ಳಾಗಿವೆ.
Click 👇