ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ (ಜೂ.5) ಪರಿಸರ ದಿನವನ್ನು ಆಚರಿಸಲಾಯಿತು.
ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನ ಬೋಧಕ ಬೋಧಕೇತರ ವೃಂದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಲೇಜಿನ ಮೂಲಿಕಾ ಉದ್ಯಾನವನದಲ್ಲಿ ಔಷಧೀಯ ಸಸ್ಯಗಳನ್ನು ನೆಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ, ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ, ದ್ರವ್ಯಗುಣ ವಿಭಾಗದ ಮುಖ್ಯಸ್ಥರು, ಸಂಸ್ಥೆಯ ಬೋಧಕ ಬೋಧಕೇತರ ವರ್ಗದವರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು ಪಾಲ್ಗೊಂಡಿದ್ದರು.