27.7 C
Sullia
Sunday, March 8, 2026

ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ದಂಡ!! ಇಲ್ಲಿದೆ ಡಿಟೇಲ್ಸ್

ನ್ಯೂಸ್ ನಾಟೌಟ್ :ಹೈಕೋರ್ಟ್‌ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ ಆದೇಶ ಹೊರಡಿಸಲಾಗಿದೆ.

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಈ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್​​ವೆಲ್​​ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತುಸೆ. ಇದಾದ ಬಳಿಕ 13ರಂದು ಮಹಾಗಣಪತಿ ಶೋಭಾಯಾತ್ರೆ ವೇಳೆ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಅಂದು ಬೆಳಗ್ಗೆ 10:30 ರಿಂದ 12:30ರ ವರೆಗೆ ದರ್ಶನಕ್ಕೆ ಕೋರ್ಟ್‌ ಅವಕಾಶ ಕಲ್ಪಿಸಿತ್ತು. ಆದ್ರೆ ಪಂಪ್‌ವೆಲ್‌ 12:45ರ ವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದಲ್ಲದೇ ಅಲ್ಲಿ ಭಾಷಣ ಕೂಡ ಮಾಡಿದ್ದರು. ಇದರಿಂದ ಆದೇಶ ಉಲ್ಲಂಘನೆ ಬಗ್ಗೆ ಪೊಲೀಸರು ಹೈಕೋರ್ಟ್‌ ಗಮನಕ್ಕೆ ತಂದಿದ್ದರು. ಬಳಿಕ ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿತು.

Related Articles

LEAVE A REPLY

Please enter your comment!
Please enter your name here

Latest Articles