ನ್ಯೂಸ್ ನಾಟೌಟ್: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ತಯಾರಾಗಿದ್ದಾರೆ. ಈ ಅವಿಸ್ಮರಣೀಯ ಕಾರ್ಯಕ್ರಮಕ್ಕೆ 8,000 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ದಕ್ಷಿಣ ರೈಲ್ವೆಯ ಚೆನ್ನೈ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ . ಮೆನನ್ ಕೂಡ ಒಬ್ಬರು ಅನ್ನೋದು ವಿಶೇಷ.
ಐಶ್ವರ್ಯ ಎಸ್ . ಮೆನನ್ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಜನ ಶತಾಬ್ದಿಯಂತಹ ವಿವಿಧ ರೈಲುಗಳನ್ನು ಪ್ರಾಯೋಗಿಕವಾಗಿ 2 ಲಕ್ಷಕ್ಕೂ ಹೆಚ್ಚು ಫುಟ್ಪ್ಲೇಟ್ ಗಂಟೆಗಳನ್ನು ಪೂರ್ಣಗೊಳಿಸಿದ ಅನುಭವಿ ಲೋಕೋ ಪೈಲಟ್ ಆಗಿದ್ದಾರೆ. ಪ್ರಸ್ತುತ ಅವರು ವಂದೇ ಭಾರತ್ ರೈಲುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಚೆನ್ನೈ- ವಿಜಯವಾಡ , ಚೆನ್ನೈ – ಕೊಯಮತ್ತೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಐಶ್ವರ್ಯ ಎಸ್ . ಮೆನನ್ ಭಾಗವಹಿಸಲಿದ್ದಾರೆ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಕೂಡ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 1988ರಲ್ಲಿ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಖ್ಯಾತಿಗೆ ಭಾಜರಾದರು. ಅವರು ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ನ ಮೊದಲ ಮಹಿಳಾ ಲೋಕೋ ಪೈಲಟ್