ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಸಿಕೊಡಲಾಗಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮುಂಬೈ ಐಐಟಿಯ ಹಿರಿಯ ವಿದ್ಯಾರ್ಥಿ, ಇಂಜಿನಿಯರ್, ಪ್ರಾಧ್ಯಾಪಕ ಡಾ.ಎ.ಎನ್. ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ನಿರ್ವಹಣೆ, ಒತ್ತಡ ನಿವಾರಣೆ ಮಾಡುವುದು ಹೇಗೆ..? ಇದರಿಂದ ಜೀವನದಲ್ಲಿ ಹೇಗೆ ಯಶಸ್ಸು ಗಳಿಸಬಹುದು ಎಂಬುದನ್ನು ವಿವರಿಸಿದರು.
ಪ್ರಾoಶುಪಾಲೆ ಮಿಥಾಲಿ ಪಿ ರೈ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ನಿರೂಪಿಸಿ, ವಂದಿಸಿದರು.