ನ್ಯೂಸ್ ನಾಟೌಟ್: ವಿಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿದ್ದು, ಸೋಮವಾರ(ಜೂ.10) ಸಂಜೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. 6 ದಿನಗಳ ಕಸ್ಟಡಿ ಮತ್ತು ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು, ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ ಪ್ರಜ್ವಲ್ ಅವರನ್ನು ನ್ಯಾಯಾಲಯದಿಂದ ನೇರವಾಗಿ ಕಾರಾಗೃಹಕ್ಕೆ ಕರೆದೊಯ್ಯಲಾಯಿತು ಎಂದು ವರದಿ ತಿಳಿಸಿದೆ. ಪ್ರಜ್ವಲ್ ರೇವಣ್ಣರ ವಿಚಾರಣೆ ಇನ್ನೂ ಬಾಕಿ ಇದೆ ಎನ್ನಲಾಗಿದ್ದು, ನ್ಯಾಯಾಲಯಕ್ಕೆ ಮತ್ತೆ ಎಸ್.ಐ.ಟಿ ಅರ್ಜಿ ಸಲ್ಲಿಸಲಿದೆ ಎನ್ನಲಾಗಿದೆ. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯವು ಮೇ 31 ರಂದು ಪ್ರಜ್ವಲ್ ರನ್ನು ಜೂನ್ 6 ರವರೆಗೆ ಎಸ್ಐಟಿ ವಶಕ್ಕೆ ನೀಡಿತ್ತು ಮತ್ತು ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತ್ತು, ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Click 👇