ನ್ಯೂಸ್ ನಾಟೌಟ್: ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಸೋಮವಾರ(ಜೂ.10) ಸಂಜೆ ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ನಾಲ್ವರು ಮಹಿಳೆಯರು ಸಮುದ್ರಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Click 👇