ನ್ಯೂಸ್ ನಾಟೌಟ್: ಆಂಧ್ರಪ್ರದೇಶದ ವಿಧಾನಸಭೆ, ಲೋಕಸಭೆಯಲ್ಲಿ ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲಿ ನಟ ಪವನ್ ಕಲ್ಯಾಣ್ ಜನಸೇನಾ ಪಕ್ಷ ಗೆದ್ದಿದೆ. ಹೀಗಾಗಿ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. ಟಿಡಿಪಿ-ಬಿಜೆಪಿ ಜೊತೆಗೂಡಿ ಚುನಾವಣೆಗೆ ಸ್ಪರ್ಧಿಸಿದ್ದ ಜನಸೇನಾ ಶೇ.100ರಷ್ಟು ಯಶಸ್ಸನ್ನು ಕಂಡಿದೆ. ಈ ಹಿನ್ನೆಲೆ ಆಂಧ್ರದಲ್ಲಿ ಟಿಡಿಪಿ- ಜನಸೇನಾ ಸಮ್ಮಿಶ್ರ ಸರ್ಕಾರ ರಚನೆಯಾಗುತ್ತಿದೆ.
ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುತ್ತಿದ್ದು, ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಮಹತ್ವದ ಸ್ಥಾನವನ್ನು ಪವನ್ ಕಲ್ಯಾಣ್ ವಹಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈಗ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ನಾಯ್ಡು ಜೊತೆ ಪವರ್ ಕಲ್ಯಾಣ್ ಕೂಡ ಪ್ರಮಾಣವಚನ ಸ್ವೀಕರಿಲಿದ್ದಾರೆ ಎನ್ನಲಾಗುತ್ತಿದೆ. ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರಂತೆ ಎನ್ನಲಾಗಿದೆ.
Click 👇