ನ್ಯೂಸ್ ನಾಟೌಟ್: ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ‘ಮಾತೃ’ ಸಂಸ್ಥೆ ಎಂದೇ ಕರೆಯಲ್ಪಡುವ ಸುಳ್ಯದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜು (ಎನ್ ಎಂಸಿ) ಅಂತಿಮ ಪದವಿ ವಿದ್ಯಾರ್ಥಿಗಳಿಗೆ (ಜೂ.14) ಶುಕ್ರವಾರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಿತ್ತು.
ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಪಾಲಿಗೆ ಅವಿಸ್ಮರಣೀಯವಾಗಿತ್ತು. ಮೂರು ವರ್ಷಗಳಿಂದ ಓದುತ್ತಾ, ನಲಿಯುತ್ತಾ, ಹರಟುತ್ತಾ ಕಳೆದ ದಿನಗಳ ಅವಿಸ್ಮರಣೀಯ ನೆನಪಿನ ಬುತ್ತಿಯನ್ನು ಕಟ್ಟಿಕೊಟ್ಟಿತು. ಮತ್ತೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಾಲೇಜು ತೊರೆದು ಮುಂದಿನ ದಾರಿಯನ್ನು ಸೇರುತ್ತಿರುವ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮಾತ್ರವಲ್ಲ ಮುಂದಿನ ಬದುಕು ಸಿಹಿಯಾಗಿರಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ, ಕಾಲೇಜಿನ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ತುಳಸಿ ಸ್ವಾಗತಿಸಿದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಜೀಷ್ಮಾ ವಂದಿಸಿದರು. ಪ್ರಥಮ ಬಿಸಿಎ ಕೌಶಿಕ್ ಮತ್ತು ಪ್ರಥಮ ಬಿಎಸ್ಸಿ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.
Click 👇