ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ಜೂನ್ 21) ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ ಎಒಎಲ್ಇ ಇದರ ಕೌನ್ಸಿಲ್ ಮೆಂಬರ್ ಜಗದೀಶ ಅಡ್ತಲೆ ಪಾಲ್ಗೊಂಡಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳಿಂದ ತೆರೆದ ಮೈದಾನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಡಾ. ಮಹಂತ್ ರಾಜ್, ಕು. ನಿತ್ಯಾದಾಸ್, ಕು. ಕೃಪಾ, ಕು. ಅರ್ಚನಾ ಎಸ್ ಹಾಗೂ ಕು. ಬಿಂದುಶ್ರೀ, ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಜಯವಾಣಿ ಎಂ. ಜಿ., ಡಾ. ಶಭೀನಾ ಟಿ.ಟಿ. ಹಾಗೂ ಸಹಾಯಕ ಪ್ರಾಧ್ಯಾಪಕಿ ಡಾ. ಐಶ್ವರ್ಯ ಬಾಲಗೋಪಾಲ್ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಕೆವಿಜಿ ಸಮೂಹ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಎಒಎಲ್ಇ ಅಧ್ಯಕ್ಷರು ಡಾ.ಕೆ.ವಿ. ಚಿದಾನಂದ ಬಹುಮಾನ ವಿತರಿಸಿದರು.
ಯೋಗ ಪೋಟೋಗ್ರಾಫಿ ಸ್ಪರ್ಧೆ: ಕೆವಿಜಿ ಸಮೂಹ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಯೋಗ ಪೋಟೋಗ್ರಾಫಿ ಸ್ಪರ್ಧೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ 4ನೇ ವರ್ಷದ ಬಿ.ಎಸ್.ಸಿ ಅರವಳಿಕೆ ಮತ್ತು ಓಟಿ ಟೆಕ್ನಾಲಜಿಯ ತಹಸ್ನಿಮಾ ಎಸ್. ಪ್ರಥಮ ಬಹುಮಾನ ಪಡೆದರು. ಕೆ.ವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಸಂಪತ್ ಎಸ್. ಹಿರೇಮಠ್ ದ್ವಿತೀಯ ಬಹುಮಾನ ಪಡೆದರು.
ಇ-ಪೋಸ್ಟಾರ್ ಸ್ಪರ್ಧೆ: ಪ್ರಥಮ ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷ್ ಡಿ. ಎಲ್., ದ್ವಿತೀಯ ಬಹುಮಾನವನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಅಂತಿಮ ಬಿ.ಎಸ್.ಸಿ ವಿಭಾಗದ ಲಿಖಿತಾ ಎನ್. ಜಿ. ಪಡೆದುಕೊಂಡರು.
ಪೋಸ್ಟಾರ್ ಮೇಕಿಂಗ್ ಸ್ಪರ್ಧೆ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ದಿಶಾ ಎ.ಎ. ಮತ್ತು ಅದಿತಿ ಕೆ.ಕೆ. ಪ್ರಥಮ, ದ್ವಿತೀಯ ಬಹುಮಾನವನ್ನು ಸ್ವಾತಿ ಆರ್. ಎನ್, ಮತ್ತು ಎಂ.ಎಂ. ಲಾವಣ್ಯ ಪಡೆದರು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಅಮೂಲ್ಯ ಹೊಸಮನಿ, ದ್ವಿತೀಯ ಬಹುಮಾನವನ್ನು ಚಿಂತನ ಎನ್. ಎಸ್. ಪಡೆದರು.
ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕಿ ಡಾ. ಕವಿತಾ ಬಿ.ಎಂ., ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜಯವಾಣಿ ಎಂ. ಜಿ., ಡಾ. ಶಭೀನಾ ಟಿ.ಟಿ. ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಅನುಷಾ ಎಂ. ನಿರೂಪಿಸಿದರು.