ನ್ಯೂಸ್ ನಾಟೌಟ್: ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅಭಿಪ್ರಾಯಪಟ್ಟರು.
ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ (ಜೂ.21) ಆಯೋಜಿಸಿದ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥ ವ್ರತ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಶಬೀನಾ ಟಿ.ಟಿ. ಮಾತನಾಡಿ, ಯೋಗ ಪ್ರಾಚೀನ ಭಾರತದ ಅಮೂಲ್ಯ ಕೊಡುಗೆಯಾಗಿದೆ. ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಮನುಷ್ಯನ ಜೀವಿತಾವಧಿ ಹೆಚ್ಚಿಸಲು ಯೋಗ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಸುಮಾಂಜಲಿ ಕಾರ್ಯಕ್ರಮ ನಿರೂಪಿಸಿದರು. ಫಾರ್ಮಾಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸವಿನ್ ಸಿ.ಜಿ. ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಯರು ಹಾಗೂ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ಯೋಗ ದಿನಾಚರಣೆ ಪ್ರಯುಕ್ತ ನಡೆಸಲಾದ ಸ್ಪರ್ಧೆಗಳ ಬಹುಮಾನವನ್ನು ಈ ಸಂದರ್ಭ ವಿಜೇತರಿಗೆ ವಿತರಿಸಲಾಯಿತು.