ನ್ಯೂಸ್ ನಾಟೌಟ್: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna)ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿಯೇ ವಿಚಾರಣೆ ಮುಗಿದ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಶನಿವಾರ(ಜೂ.22) ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.
ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಸೂರಜ್ ರೇವಣ್ಣ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಬಳಿಕ ಸೂರಜ್ ಜೊತೆಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು ಎಂದು ವರದಿ ತಿಳಿಸಿದೆ.