ನ್ಯೂಸ್ ನಾಟೌಟ್ : ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಸರ್ಕಾರ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದೆ.ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.
ʻಇಂದಿರಾ ಆಹಾರ ಕಿಟ್ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು 1 ಕೆಜಿ ಹಾಗೂ 1 ಲೀಟರ್ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ (INDIRA Food Kit) ನೀಡಲಾಗುತ್ತದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ.













