ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ (Narendra Modi) ಜುಲೈ 8 ರಂದು ರಷ್ಯಾಗೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಭೇಟಿಯ ಸಂದರ್ಭದಲ್ಲಿ ರಕ್ಷಣೆ, ತೈಲ, ಅನಿಲ ಮತ್ತು ಇತರ ಭಾರತೀಯ ಕಾರ್ಯತಂತ್ರದ ಹಿತಾಸಕ್ತಿಗಳ ಕುರಿತು ಚರ್ಚೆ ನಡೆಯಲಿದೆ ಎಂದು ವರದಿಯಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲು ಕೆಲವೇ ತಿಂಗಳು ಬಾಕಿ ಇರುವಾಗ ಮೋದಿ ರಷ್ಯಾಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ತೆರಳುತ್ತಿರುವ ಎರಡನೇ ವಿದೇಶ ಪ್ರವಾಸ ಇದಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿ ಮಾಡಿದ್ದರು.
Click 👇