ನ್ಯೂಸ್ ನಾಟೌಟ್ : 13 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸರ್ಫರಾಜ್ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದು, ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ ಎಂದು ವರದಿ ತಿಳಿಸಿದೆ. ಶುಕ್ರವಾರ(ಜೂ.29) ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಕೆಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದರು. ಹೊಟ್ಟೆನೋವಿನಿಂದ ಬಾಲಕಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಅತ್ಯಾಚಾರ ಎಸಗಿದ ಆರೋಪಿ ಸರ್ಫರಾಜ್ ಮಿರ್ಜಾನನ್ನು ಪೊಲೀಸರು ಬಂಧಿಸಿದ್ದಾರೆ.
Click 👇