ನ್ಯೂಸ್ ನಾಟೌಟ್: ಪ್ರಜ್ವಲ್ ರೇವಣ್ಣ (Prajwal Revanna)ನನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್ಡಿ ರೇವಣ್ಣ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ ಎನ್ನಲಾಗಿದೆ. ಸೋಮವಾರ(ಜುಲೈ 1) ಭವಾನಿ ರೇವಣ್ಣ ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್ಡಿ ರೇವಣ್ಣ ಆಗಮಿಸಿದ್ದಾರೆ.
ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ್ದ ಅವರು, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಎಂತೆಂಥವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಹೇಳಿದ್ದಾರೆ.
Click 👇