ನ್ಯೂಸ್ ನಾಟೌಟ್: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಸುಳ್ಯ ವಲಯದ ವತಿಯಿಂದ ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲು ಎಂಬಲ್ಲಿ ವನ ಮಹೋತ್ಸವ ಆಚರಿಸಲಾಯಿತು.
ಜುಲೈ 8 ರಂದು ಗ್ರಾಮ ಪಂಚಾಯತಿ ಸದಸ್ಯರಾದ ಗೀತಾ ಕೋಲ್ಟಾರು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಬ್ದುಲ್ ಪೈಜಿ ಅಧ್ಯಕ್ಷತೆ ವಹಿಸಿದ್ದರು. ವನಮಹೋತ್ಸವ ಆಚರಣೆ ಬಗ್ಗೆ ಆಲೆಟ್ಟಿ ಶಾಖಾ ಉಪವಲಯ ಅರಣ್ಯಾಧಿಕಾರಿಗಳಾದ ವೆಂಕಟೇಶ ಎಂಬವರು ಪ್ರಾಸ್ತಾವಿಕ ಮಾತನಾಡಿ, ಪರಿಸರ ಸಂರಕ್ಷಣೆಯ ಮಹತ್ವ ಮತ್ತು ಅಗತ್ಯತೆಯ ಬಗ್ಗೆ ಸಲಹೆ ನೀಡಿದರು.
ವೇದಿಕೆಯಲ್ಲಿ ಧರ್ಮಪಾಲ ಕೊಯಿಂಗಾಜೆ, ಮುಖ್ಯ ಶಿಕ್ಷಕರಾದ ವಿಶಾಲಾಕ್ಷಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಸಮಿತಿ ಸದಸ್ಯರು, ಇಲಾಖಾ ಸಿಬ್ಬಂದಿಗಳು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದ್ದಾರೆ.
Click 👇