ನ್ಯೂಸ್ ನಾಟೌಟ್: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವಂತೆ ಹಲವರು ಒತ್ತಾಯಿಸುತ್ತಿದ್ದಾರೆ. ಇದೀಗ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಭಾನುವಾರ(ಜುಲೈ.14) ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಪುತ್ತೂರು ತಾಲೂಕಿನ ಬಂಟ್ವಾಳದ ಶಂಭೂರು ನಿವಾಸಿ ಯತೀಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಂಟ್ವಾಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯಲ್ಲಿ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
‘ಜ್ವರದ ಮೊದಲ ದಿನವೇ ರೋಗಿಯ ಮೆದುಳಿನಲ್ಲಿ ಊತ ಕಂಡು ಬಂದಿದೆ. ತೀವ್ರ ಜ್ವರ ಕಾಣಿಸಿಕೊಂಡಿದೆ. ಇದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Click 👇