ನ್ಯೂಸ್ ನಾಟೌಟ್: 14 ವರ್ಷದ ಬಾಲಕನಿಗೆ ನಿಫಾ ವೈರಸ್ (Nipah Virus) ಸೋಂಕು ತಗುಲಿರುವುದು ದೃಢಪಟ್ಟ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ ನಡೆದಿದೆ. ಜನರಲ್ಲಿ ಆತಂಕ ಮೂಡಿಸಿದೆ.
ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ರಾಜ್ಯವು ಜಾಗರೂಕವಾಗಿದೆ. ನಿಪಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವುದು, ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವುದು ಮತ್ತು ನಿಯಂತ್ರಣದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.
ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.