ನ್ಯೂಸ್ ನಾಟೌಟ್: ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಶಿರವಳಲು ಗ್ರಾಮದಲ್ಲಿ ನಡೆದಿದೆ.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿರವಳಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಹಲವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click