ನ್ಯೂಸ್ ನಾಟೌಟ್: ಕಾರಿನಲ್ಲಿ ಬಂದ ಯುವಕನೋರ್ವ ದೇಶದ ವಾಣಿಜ್ಯ ನಗರಿ ಮುಂಬೈನ ಅಟಲ್ ಸೇತುವಿನಿಂದ (Atal Setu Bridge) ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತ ಯುವಕ ಸಾಫ್ಟ್ವೇರ್ ಉದ್ಯೋಗಿಯಾಗಿದ್ದು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ, ಇದರಿಂದ ಖಿನ್ನತೆಗೆ ಒಳಗಾಗಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. 38 ವರ್ಷದ ಮೃತ ಯುವಕ ಎಂಜಿನಿಯರ್ ಆಗಿದ್ದು, ಬುಧವಾರ(ಜುಲೈ.24) ಮಧ್ಯಾಹ್ನ ಇಲ್ಲಿನ ಅಟಲ್ ಸೇತುದಿಂದ ಜಿಗಿದಿದ್ದಾನೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.
ಈ ಘಟನೆ ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ನಡೆದಿದ್ದು, ಸ್ಥಳೀಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಜನರ ಕಣ್ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದನ್ನು ಟೋಲ್ ಕಂಟ್ರೋಲ್ ರೂಮ್ನವರ ಗಮನಿಸಿದ್ದಾರೆ. ಆಗ ಕೂಡಲೇ ಅವರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಎಂಟಿಎಚ್ಎಲ್ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.
Click