ನ್ಯೂಸ್ ನಾಟೌಟ್: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.(Dengue)
ಬೆಂಗಳೂರಿನ ಯಲಹಂಕದ ದಲ್ಲಿ ಇಂದು(ಜು.26) ಡೆಂಗ್ಯೂ ಬಾಧಿತರಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಹೇಳಿಕೆ ನೀಡಿದ್ದಾರೆ. ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು(ಶುಕ್ರವಾರ) ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ.
ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್ ಗಳನ್ನ ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನ ಡೆಂಗ್ಯೂ ಟೆಸ್ಟಿಂಗ್ ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Click