ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಯಾಡಿ ಪಡ್ಡಡ್ಕ ನಿವಾಸಿ ನರ್ಸ್ ರೆಜಿ ಜೋಸೆಫ್ (50) ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಎ.೧೬ರಂದು ಮಧ್ಯಾಹ್ನ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ರೆಜಿ ಜೋಸೆಫ್ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರೆಜಿ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರೆಜಿ ಜೋಸೆಫ್ ರವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದರು. ಕಾರಿನಲ್ಲಿದ್ದ ಇವರ ಪತಿ ಜೋಸೆಫ್, ಮಗ ಹಾಗೂ ಮಗಳು ಗಾಯಗೊಂಡಿದ್ದು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ರೆಜಿ ಪತಿ ಜೋಸೆಫ್, ನಾಲ್ವರು ಪುತ್ರರು, ಓರ್ವ ಪುತ್ರಿ, ತಂದೆ-ತಾಯಿಯನ್ನು ಅಗಲಿದ್ದಾರೆ.