ನ್ಯೂಸ್ ನಾಟೌಟ್: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಸುಳ್ಯ ಇದರ 2023-24ನೇ ಸಾಲಿನ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಗುರುವಾರ (ಆ.1) ವಿದಾಯ ಕೂಟ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ ಬಿ. ಅಧ್ಯಕ್ಷತೆ ವಹಿಸಿದ್ದರು. ಬೀಳ್ಕೊಡಲ್ಪಡುತ್ತಿರುವ ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಎಚ್.ಎಸ್. ಹಿರಿಯ ಉಪನ್ಯಾಸಕರಾದ ಜಯರಾಮ್ ವೈ. ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಸಾಂದ್ರ ಎ.ವಿ. ಪ್ರಾರ್ಥಿಸಿದರು. ವಿದ್ಯಾರ್ಥಿ ಜೀವಿತ್ ಕೆ.ಪಿ. ಸ್ವಾಗತಿಸಿದರು. ವಿದ್ಯಾರ್ಥಿನಿ ವಿಸ್ಮಯ ಗಂಗಮ್ಮ ಕೆ.ಎಲ್. ಕಾರ್ಯಕ್ರಮ ನಿರೂಪಿಸಿದರು. ನಂತರ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Click