ನ್ಯೂಸ್ ನಾಟೌಟ್: ನಿನ್ನೆ(ಆ.1) ರಾತ್ರಿ ಮಟನ್ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಗಂಡ-ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭೀಮಣ್ಣ (60), ಈರಮ್ಮ (57), ಮಲ್ಲೇಶ್ (21), ಪಾರ್ವತಿ (19) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಭೀಮಣ್ಣ ಅವರ ಮತ್ತೊಬ್ಬ ಪುತ್ರಿ ಮಲ್ಲಮ್ಮ (18) ತೀವ್ರ ಅಸ್ವಸ್ಥಗೊಂಡಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಸದ್ಯ ಮಲ್ಲಮ್ಮಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೀಮಣ್ಣ ನಿನ್ನೆ ಮಟನ್ ತಂದಿದ್ದು, ಕುಟುಂಬಸ್ಥರು ನಿನ್ನೆ ರಾತ್ರಿ ಚೆನ್ನಾಗಿ ಊಟ ಮಾಡಿ ಮಲಗಿದ್ದಾರೆ. ಆದರೆ ರಾತ್ರೋ ರಾತ್ರಿ ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದವರಿಗೆ ಮಟನ್ ತಿಂದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಮತ್ತೊಂದೆಡೆ ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಭೀಮಣ್ಣನ ಮನೆಯವರು ಸಂಕಷ್ಟದಲ್ಲಿದ್ದು ಹೆಂಡತಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಾಲ್ವರ ಸಾವಿನ ಕುರಿತು ತನಿಖೆ ಬಳಿಕವೇ ಅಸಲಿ ಸತ್ಯ ಹೊರಬರಬೇಕಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿಸುತ್ತಿದ್ದಾರೆ. ಬದುಕುಳಿದರೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದು ಮಾತನಾಡುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ.
Click