ನ್ಯೂಸ್ ನಾಟೌಟ್: ಭಾರತದ ನೆರೆಯ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಮೀಸಲಾತಿ ವಿರೋಧಿ ಹಿಂಸಾಚಾರ ಭುಗಿಲೆದ್ದಿದೆ. ಇಂದು(ಆ.5) ಬಾಂಗ್ಲಾ ದೇಶದ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವ ಶೇಖ್ ಹಸೀನಾ, ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಶೇಖ್ ಹಸೀನಾ ದೇಶ ಬಿಟ್ಟು ಓಡಿ ಹೋಗಿದ್ದಾರೆ ಎಂದೂ ಮಾಹಿತಿಗಳು ಹರಿದಾಡುತ್ತಿವೆ. ಆದರೆ, ಅಧಿಕೃತ ಮೂಲಗಳು ಅವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾನೆ ಎನ್ನುತ್ತಿವೆ.
ಈ ಹಿಂಸಾಚಾರದಲ್ಲಿ ಬಾಂಗ್ಲಾ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಶೇಖ್ ಹಸೀನಾ ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶೇಖ್ ಹಸೀನಾ ಹಾಗೂ ಅವರ ಸಹೋದರಿ ಇಬ್ಬರೂ ಕೂಡಾ ಬಾಂಗ್ಲಾ ದೇಶದ ಪ್ರಧಾನ ಮಂತ್ರಿಗಳ ಅಧಿಕೃತ ಸರ್ಕಾರಿ ನಿವಾಸವಾದ ‘ಗಾನಭಬನ್’ನಿಂದ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ ಎಂದಷ್ಟೇ ಮೂಲಗಳಿಂದ ಮಾಹಿತಿ ಲಭ್ಯವಾಗುತ್ತಿದೆ. ಈ ಸುರಕ್ಷಿತ ಸ್ಥಳವು ಬಾಂಗ್ಲಾ ದೇಶದ ರಾಜಧಾನಿ ಢಾಕಾದಲ್ಲೇ ಇದೆಯೋ? ಅಥವಾ ದೇಶದ ಹೊರಗೆ ಬೇರೆ ಕಡೆ ಇದೆಯೋ ಅನ್ನೋದು ಗೊತ್ತಾಗಿಲ್ಲ.
ಈ ನಡುವೆ ತಾವು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಸುರಕ್ಷಿತ ಸ್ಥಳಕ್ಕೆ ತೆರಳುವ ಮುನ್ನ ಶೇಖ್ ಹಸೀನಾ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿತ್ತು. ಜೊತೆಯಲ್ಲೇ ತಮ್ಮ ಭಾಷಣವನ್ನು ಧ್ವನಿ ಮುದ್ರಣ ಮಾಡುತ್ತಾರೆ ಎಂದೂ ಹೇಳಲಾಗಿತ್ತು ಆದರೆ ಇದಾವುದಕ್ಕೂ ಶೇಖ್ ಹಸೀನಾಗೆ ಅವಕಾಶ ಸಿಗಲೇ ಇಲ್ಲ ಎನ್ನಲಾಗಿದೆ.
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಹಾಗೂ ಶೇಖ್ ಹಸೀನಾ ಅವರೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಸೇನಾಡಳಿತ ಜಾರಿಯಾಗಿದೆ ಎನ್ನಲಾಗುತ್ತಿದೆ.
Click
https://newsnotout.com/2024/08/wayanad-kannada-news-first-person-who-called-emergency-call-about-incident/ https://newsnotout.com/2024/08/pilgrims-kannada-news-current-shock-kannada-news-police-investigation/