ನ್ಯೂಸ್ ನಾಟೌಟ್: ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಾಲಾ ಗ್ರಾಮಗಳಲ್ಲಿ ಮಳೆಯಿಂದ ಉಂಟಾದ ಭೂಕುಸಿತದಿಂದ ಸಂತ್ರಸ್ತರ ಶವಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ. ಈ ವೇಳೆ ಪ್ರಧಾನಿ ಮೋದಿ ಕೇರಳಕ್ಕೆ ಶನಿವಾರ (ಆ.10) ಭೇಟಿ ನೀಡಲಿದ್ದಾರೆ ಎಂದು ನ್ಯೂಸ್ ನಾಟೌಟ್ ಗೆ ಭಾರತೀಯ ಸೇನೆಯ ಉನ್ನತ ಮೂಲಗಳು ತಿಳಿಸಿವೆ.
ಈ ಮಧ್ಯೆ, ಶೋಧ ಎಷ್ಟು ಕಾಲ ಮುಂದುವರಿಯುತ್ತದೆ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ರಕ್ಷಣಾ ಪಡೆಗಳಿಗೆ ತಿಳಿಸಿದೆ. ಭೂಕುಸಿತ ಸಂಭವಿಸಿದ ಸ್ಥಳಗಳು ಮತ್ತು ಚಾಲಿಯಾರ್ ನದಿಯಿಂದ ಈವರೆಗೆ 400ಕ್ಕೂ ಹೆಚ್ಚು ಶ* ವಗಳು ಮತ್ತು 193 ದೇ* ಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ವರದಿಯಾಗಿದೆ. ಪ್ರಧಾನಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಲಿದ್ದಾರೆ.
Click