ನ್ಯೂಸ್ ನಾಟೌಟ್: ಬೆಂಗಳೂರಿನ ಮೆಜೆಸ್ಟಿಕ್ ನ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವ ಮಾಂಸ ಅದು ನಾಯಿ ಮಾಂಸ ಅಲ್ಲ ಅದು ಕುರಿ ಮಾಂಸ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.
ಹೈದರಾಬಾದ್ ನ ಲ್ಯಾಬ್ ರಿಪೋರ್ಟ್ ಇದೀಗ ಕೈ ಸೇರಿದ್ದು ಅದರಲ್ಲಿ ಅದು ನಾಯಿ ಮಾಂಸ ಅಲ್ಲ ಕುರಿ ಮಾಂಸ ಅನ್ನುವುದು ರಿಪೋರ್ಟ್ ಬಂದಿದೆ ಎಂದು ತಿಳಿಸಿದ್ದಾರೆ.ಈ ಮೂಲಕ ಇದು ನಾಯಿ ಮಾಂಸ ಎಂದು ವಾದ ಮಾಡಿಕೊಂಡು ಬಂದಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮತ್ತು ತಂಡಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.
ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದರು.
ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್ ರಜಾಕ್ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಬಾಕ್ಸ್ನಲ್ಲಿದ್ದ ಮಾಂಸದ ಸ್ಯಾಂಪಲ್ಅನ್ನು ಹೈದರಾಬಾದ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಈಗ ಲ್ಯಾಬ್ ವರದಿ ಬಂದಿದ್ದು, ಅದು ಕುರಿ ಮಾಂಸವೇ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಅಲ್ಲಿಗೆ, ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ.