ನ್ಯೂಸ್ ನಾಟೌಟ್: ಮಾನವ-ಆನೆ ಸಂಘರ್ಷ ತಡೆಗೆ ನಮ್ಮ ಸರ್ಕಾರ ಎಲ್ಲಾ ಕ್ರಮಗೊಂಡಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ವಿಶೇಷ ಟಾಸ್ಕ್ ಫೋರ್ಸ್ ಸೇರಿದಂತೆ ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ವಿಶ್ವ ಆನೆ ದಿನದ ಅಂಗವಾಗಿ ಬೆಂಗಳೂರಿನ ಜಿಕೆವಿಕೆಯಲ್ಲಿ ʻಮಾನವ-ಆನೆ ಸಂಘರ್ಷ ನಿರ್ವಹಣೆʼ ವಿಷಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಮಾನವ-ಆನೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಈ ಅಂತಾರಾಷ್ಟ್ರೀಯ ಸಮ್ಮೇಳನ ಮಾನವ-ಆನೆ ಸಂಘರ್ಷಗಳನ್ನ ಕಡಿಮೆ ಮಾಡುವಲ್ಲಿ ಕ್ರಮ ಕೈಗೊಳ್ಳಲು ಉತ್ತಮವಾಗಿದೆ. ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿವೆ. ಅತಿ ಹೆಚ್ಚು ಹುಲಿ ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತಿ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯವೂ ಆಗಿದೆ ಎಂದು ಶ್ಲಾಘಿಸಿದರು.
ಕರ್ನಾಟಕದಲ್ಲಿ ಮೈಸೂರು ಮತ್ತು ದಾಂಡೇಲಿ ಮೀಸಲು ಅರಣ್ಯ ಪ್ರದೇಶಗಳಿವೆ. ಕಳೆದ 10 ವರ್ಷಗಳಲ್ಲಿ 2,500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ. ಮಾನವ ಪ್ರಾಣಿ ಸಂಘರ್ಷಗಳ ತಡೆಗೆ ಕರ್ನಾಟಕ ಸರ್ಕಾರ ವಿಶೇಷ ಅನುದಾನ ನೀಡಿದೆ. ಬಜೆಟ್ನಲ್ಲಿ ಇದಕ್ಕಾಗಿಯೇ ಹಣ ಮೀಸಲಿಟ್ಟಿದೆ ಎಂದಿದ್ದಾರೆ.
Click