ನ್ಯೂಸ್ ನಾಟೌಟ್: ದೇಶದಾದ್ಯಂತ ಸಂಭ್ರಮದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಂತೆಯೇ ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ ಚಿದಾನಂದ ಅವರು ಧ್ವಜಾರೋಹಣ ನಡೆಸಿದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ| ನೀಲಾಂಬಿಕೈ ನಟರಾಜನ್, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ| ಸಿ.ಆರ್. ಭಟ್, ಗೌರವ ಪ್ರಾಧ್ಯಾಪಕಿ ಶೀಲಾ ಜಿ. ನಾಯಕ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ ಪ್ರಾಂಶುಪಾಲೆ ಚಂದ್ರಾವತಿ ಕೆ.ಎಸ್. ಬಿ.ಎಂ. ಪ್ರೇಮ, ಡಾ. ಸುಬ್ರಹ್ಮಣ್ಯ ಭಟ್, ಡಾ ಸುಧಾ ರುದ್ರಪ್ಪ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು,ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ. ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಎಡ್ವೈಸರ್ ಪ್ರೋ. ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲು, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಕೆವಿಜಿ ಆಯುರ್ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಪುರುಷೋತ್ತಮ ಕೆ.ಜಿ., ಕೆವಿಜಿ ಆಯುರ್ವೇದ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ. ಜಿ., ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ )ನ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿವರ್ಷ ಸ್ವಾತಂತ್ರ್ಯ ಸಿಕ್ಕಿದ ದಿನವನ್ನು ಭಾರತೀಯರಾದ ನಾವು ಹೆಮ್ಮೆಯಿಂದ ಸ್ಮರಿಸಿ ಅದರ ಮಹತ್ವ ತಿಳಿಯಬೇಕಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ ಎಂದರು.
ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರೊ. ಬಾಲಚಂದ್ರ ಗೌಡ, ಎಂಎಂಪಿಯು ನ ನಿವೃತ್ತ ಪ್ರಾಂಶುಪಾಲ ಜವರೇಗೌಡ, ಎನ್ಎಂಸಿಯ ನಿವೃತ್ತ ಪ್ರಾಂಶುಪಾಲ ಡಾ.ಪ್ರಭಾಕರ್ ಶಿಶಿಲ, ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ., ಎನ್ಎಂಸಿ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂಎಂ, ಎನ್ಎಂಪಿಯು ಪ್ರಾಂಶುಪಾಲೆ ಮಿಥಾಲಿ ಕೆ. ರೈ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.