ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎ.ಒ.ಎಲ್.ಇ. ಕಾರ್ಯದರ್ಶಿ ಹೇಮನಾಥ್ ಕೆ.ವಿ., ಇಂದಿನ ಯುವ ಜನಾಂಗವು ಕಾನೂನಿನ ಮಹತ್ವವನ್ನು ಅರಿತು ದೇಶದ ಶಕ್ತಿಯಾಗಿ ರೂಪುಗೊಳ್ಳಬೇಕು. ಈ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರು.
ಎ.ಒ.ಎಲ್.ಇ ಸಲಹೆಗಾರ ಪ್ರೊ. ಕೆ.ವಿ.ದಾಮೋದರ ಗೌಡ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ ಬಿ. ಮತ್ತು ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.