ನ್ಯೂಸ್ ನಾಟೌಟ್: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾವು ಆಗಸ್ಟ್ 16(ಶುಕ್ರವಾರ) ರಂದು ರಾಜಕೀಯ ಪ್ರತಿಭಟನೆಗಳು ಮತ್ತು ರ್ಯಾಲಿಗಳು ನಡೆಯಲಿವೆ. ಬಿಜೆಪಿಯ ಮಹಿಳಾ ಘಟಕವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನಿವಾಸಕ್ಕೆ ಕ್ಯಾಂಡಲ್ ಮಾರ್ಚ್ ನಡೆಸಲಿದೆ. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ 12 ಗಂಟೆಗಳ ಸಾರ್ವತ್ರಿಕ ಮುಷ್ಕರಕ್ಕೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕರೆ ನೀಡಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲು ಆಗಸ್ಟ್ 17 ರಂದು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ನಗರದ ಆರ್ಜಿ ಕಾರ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಮಮತಾ ಬ್ಯಾನರ್ಜಿ ಪ್ರತಿಭಟನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಕೋಲ್ಕತ್ತಾ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಕೇಂದ್ರೀಯ ತನಿಖಾ ದಳವನ್ನು ಮುಂದಿನ ಭಾನುವಾರದೊಳಗೆ ನ್ಯಾಯ ಒದಗಿಸಬೇಕು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ನಡುವೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 17 ರಂದು ಬೆಳಿಗ್ಗೆ 6 ರಿಂದ ಆಗಸ್ಟ್ 18ರ ಬೆಳಿಗ್ಗೆ 6 ರವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಇನ್ಯಾವುದೇ ರೀತಿಯ ಚಿಕಿತ್ಸಾ ಸೌಲಭ್ಯವಿರುವುದಿಲ್ಲ ಎಂದು ತಿಳಿಸಿದೆ.
Click