ನ್ಯೂಸ್ ನಾಟೌಟ್: ನಾಡಿನೆಲ್ಲೆಡೆ ಗುರುವಾರ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು. ಸುಳ್ಯದ ಕೆ.ವಿ.ಜಿ. ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾರ್ ಆರ್ಕೆಡ್ನಲ್ಲಿ ಕಾರ್ಯಾಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್ 78ನೇ ವರ್ಷದ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸುಳ್ಯ ಕೆವಿಜಿ ಆರ್ಯುವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ. ವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು.
ಅಂಜಲಿ ಮೊಂಟೆಸ್ಸರಿ ಸ್ಕೂಲ್ನ ಅಧ್ಯಕ್ಷ ಶುಭಕರ್ ಅಧ್ಯಕ್ಷತೆ ವಹಿಸಿದ್ದರು. ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷ ತೊಟ್ಟು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಮಾನ್ಹಾ ಹಾಗೂ ಸಾದ್ವಿನಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ. ವೇದಿಕೆಯಲ್ಲಿದ್ದರು. ಶಾಲಾ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.