ನ್ಯೂಸ್ ನಾಟೌಟ್ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಹೇಳಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಸೂಚನೆಯನ್ನು ಕೆಳಹಂತದ ನ್ಯಾಯಾಲಯಕ್ಕೆ ನೀಡಿದೆ.
ಸೋಮವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿಯ ವಿಚಾರಣೆಯನ್ನು ಆಗಸ್ಟ್ 29ರ ಮಧ್ಯಾಹ್ನ 2.30ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ. ಅಲ್ಲದೇ ಅಲ್ಲಿಯ ತನಕ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿತು.
ಕೋರ್ಟ್ ಅರ್ಜಿಯ ಎಲ್ಲಾ ಪ್ರತಿವಾದಿಗಳು ಸಹ ಆಕ್ಷೇಪಣೆ ಸಲ್ಲಿಕೆ ಮಾಡಲು ಅವಕಾಶ ನೀಡಿತು. ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದವನ್ನು ಆಲಿಸಿ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 29ರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿತು. ಅಲ್ಲಿಯ ತನಕ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚಿಸಿತು.
Click